ಪ್ಯಾಸೆಂಜರ್ ಆಟೋಗೆ ಲಾರಿ ಡಿಕ್ಕಿ – ಮೂವರು ಯುವಕರು ಸ್ಥಳದಲ್ಲೇ ಸಾವು…

333
firstsuddi

ಮಂಡ್ಯ : ಪ್ಯಾಸೆಂಜರ್ ಆಟೋಗೆ ಲಾರಿ ಡಿಕ್ಕಿ ಹೊಡೆದು ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ದುಂಡಳ್ಳಿ ಗ್ರಾಮದ ಬಳಿ ನಡೆದಿದೆ. ಅಭಿ(20), ಪ್ರಶಾಂತ್(21) ಹಾಗೂ ಕೃಷ್ಣ(23) ಮೃತ ಯುವಕರು ಎಂದು ಗುರುತಿಸಲಾಗಿದ್ದು, ಮೃತ ಯುವಕರು ನಿನ್ನೆ ತಡರಾತ್ರಿ ಮದ್ದೂರಿನಿಂದ ಆಟೋದಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಯುವಕರ ಮೃತದೇಹವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಕುರಿತು ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.