ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ರಚನೆ-10 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ…

193
firstsuddi

ಬೆಂಗಳೂರು : ಕೊನೆಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ನೂತನ ಸಚಿವರಾಗಿ 10 ಮಂದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲರಾದ ವಿ.ಆರ್. ವಾಲಾ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ನೂತನ ಸಚಿವರಾಗಿ ಎಸ್.ಟಿ. ಸೋಮಶೇಖರ್, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಕೆ.ಸುಧಾಕರ್, ಭೈರತಿ ಬಸವರಾಜ್, ಶಿವರಾಂ ಹೆಬ್ಬಾರ್, ಬಿ.ಸಿ. ಪಾಟೀಲ್, ಗೋಪಾಲಯ್ಯ, ನಾರಾಯಣಗೌಡ ಹಾಗೂ ಶ್ರೀಮಂತ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದರು.