ಆ್ಯಸಿಡ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ-ಏಳು ಮಂದಿ ದುರ್ಮರಣ…

146
firstsuddi

ಉತ್ತರ ಪ್ರದೇಶ : ಕಾರ್ಪೆಟ್ ಕಾರ್ಖಾನೆ ಹಾಗೂ ಆ್ಯಸಿಡ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಏಳು ಮಂದಿ ಮೃತಪಟ್ಟಿರುವ ಘಟನೆ ಕೋಟ್ವಾಲಿ ಬಿಸ್ವಾನ್ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕಾರ್ಮಿಕರು ಎಂದಿನಂತೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ ಮೂವರು ಪುರುಷರು, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಆಡಳಿತಾಧಿಕಾರಿಗಳು ಭೇಟಿ ನೀಡಿ ಕಾರ್ಯಚರಣೆ ನಡೆಸುತ್ತಿದ್ದಾರೆ.