ನಿರ್ಭಯಾ ಪ್ರಕರಣ : ಇಂದು ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ…

220
firstsuddi

ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಆರೋಪಿಗಳಿಗೆ ಫೆ.1 ರಂದು ನಿಗದಿಯಾಗಿದ್ದ ಗಲ್ಲು ಶಿಕ್ಷೆಯನ್ನು ದೆಹಲಿಯ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಈಗಾಗಲೇ ದೆಹಲಿ ಹೈಕೋರ್ಟ್ ಪ್ರಕರಣದ ಎಲ್ಲಾ ಆರೋಪಿಗಳನ್ನು ಒಂದೇ ದಿನ ಗಲ್ಲಿಗೇರಿಸಬೇಕು ಎಂದು ತೀರ್ಪು ನೀಡಿದ್ದು, ಆರೋಪಿಗಳು ಇನ್ನು ಒಂದು ವಾರದೊಳಗೆ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದೆ. ಒಂದು ವೇಳೆ ಒಂದು ವಾರದೊಳಗೆ ಅಪರಾದಿಗಳು ಯಾವುದೇ ಅರ್ಜಿಯನ್ನು ಸಲ್ಲಿಸದಿದ್ದರೆ ವಿಳಂಬವಿಲ್ಲದೆ ಮುಂದಿನ ಕ್ರಮ ಕೈಗೊಳ್ಳಬಹುದು ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ.