ಮಂಡ್ಯ : ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಿಕ್ಷಕ ಭಾಸ್ಕರ್ ನಾಡಿಗೇರ್ ಎಂಬುವವರು ಪ್ರತಿನಿತ್ಯ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ಈ ಕುರಿತು ಶಿಕ್ಷಕನಿಂದ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಶಿಕ್ಷಕನ ಈ ನೀಚ ಕೃತ್ಯವನ್ನು ವಿಚಾರಿಸಲು ಪೋಷಕರು ಶಾಲೆಗೆ ಮುತ್ತಿಗೆ ಹಾಕಿದಾಗ ಶಾಲಾ ಶೌಚಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಯರೊಂದಿಗೆ ಕಾಮುಕ ಶಿಕ್ಷಕ ಸಿಕ್ಕಿ ಬಿದ್ದಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದು, ಶಿಕ್ಷಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










