ಮಂಗಳೂರು: ಉಡುಪಿ ಕಡೆಯಿಂದ ಕಾಸರಗೋಡು ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಂಪ್ ವೆಲ್ ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಫ್ಲೈ ಓವರ್ ನ ಡಿವೈಡರ್ ಗೆ ಢಿಕ್ಕಿಯಾಗಿ ಬಳಿಕ ಎದುರುನಿಂದ ಬರುತ್ತಿದ್ದ ಕಾರಿಗೂ ಢಿಕ್ಕಿಯಾಗಿ ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದು, ಎರಡು ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.










