ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರು ರೇವತಿ ಅವರೊಂದಿಗೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಗರದ ತಾಜ್ ವೆಸ್ಟೆಂಡ್ ಖಾಸಗಿ ಹೋಟೆಲ್‍ನಲ್ಲಿ ನಿಖಿಲ್ ಹಾಗೂ ರೇವತಿ ಅವರ ನಿಶ್ಚಿತಾರ್ಥ ಒಕ್ಕಲಿಗ ಸಂಪ್ರದಾಯದಂತೆ ನಡೆದಿದ್ದು, ಶ್ವೇತ ವರ್ಣದಿಂದ ಕಂಗೊಳಿಸುತ್ತಿದ್ದ ಮಂಟಪದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ರೇವತಿ ಅವರಿಗೆ ವಜ್ರದ ಉಂಗುರ ಉಂಗುರವನ್ನು ತೊಡಿಸಿದ್ದಾರೆ. ಈ ಅದ್ದೂರಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಕುಟುಂಬದ ಆಪ್ತ ವಲಯ, ರಾಜಕೀಯ ಗಣ್ಯರು, ಸಿನಿ ರಂಗದವರು, ಸಂಬಂಧಿಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿ ಯುವ ಜೋಡಿಗಳಿಗೆ ಶುಭಕೋರಿದ್ದಾರೆ.










