ಚಿಕ್ಕಮಗಳೂರು : ಮಂಗನ ಕಾಯಿಲೆ ಭೀತಿ-ಮೂವರು ಕಾರ್ಮಿಕರಲ್ಲಿ ದೃಢ…

239
firstsuddi

ಚಿಕ್ಕಮಗಳೂರು : ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಮಡಬೂರು ಗ್ರಾಮದ ಸುತ್ತಮುತ್ತಲಿನ ಭಾಗಗಳಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಮಧ್ಯಪ್ರದೇಶದಿಂದ ಕಾಫಿ ತೋಟದ ಕೆಲಸಕ್ಕೆ ಬಂದಿದ್ದ ಮೂವರು ಕೂಲಿ ಕಾರ್ಮಿಕರಲ್ಲಿ ಮಂಗನ ಕಾಯಿಲೆ ಇರುವುದಾಗಿ ದೃಢಪಟ್ಟಿದೆ. ಈ ಹಿಂದೆ ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕ ಸೃಷ್ಠಿಸಿದ ಮಂಗನ ಕಾಯಿಲೆ ಈಗಾ ಜಿಲ್ಲೆಯಲ್ಲೂ ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಅಲ್ಲದೇ ಮೂವರು ಕಾರ್ಮಿಕರ ರಕ್ತದ ಮಾದರಿಯನ್ನು ಶಿವಮೊಗ್ಗದ ವೈರಸ್ ಪರಿಶೋಧನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮೂವರು ಸೋಂಕಿತರಲ್ಲಿ ಇಬ್ಬರು ಮಧ್ಯಪ್ರದೇಶಕ್ಕೆ ಹಿಂದಿರುಗಿದ್ದು, ಓರ್ವ ಮಹಿಳೆಗೆ ಎನ್.ಆರ್. ಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ತೋಟದ ಉಳಿದ ಕಾರ್ಮಿಕರಿಗೆ ಈ ಸೋಂಕು ಹರಡದಂತೆ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಂಡಿದ್ದು, ಮಂಗನ ಕಾಯಿಲೆ ಪತ್ತೆಯಾಗಿರುವ ಜಾಗವನ್ನು ಹಾಟ್ ಸ್ಪಾಟ್ ಎಂದು ಗುರುತಿಸಿ ಆ ಜಾಗದ 5 ಕಿ.ಮೀ ಸುತ್ತಳತೆಯಲ್ಲಿ ರೋಗ ನಿರೋಧಕ ಔಷಧಿಯನ್ನು ಸಿಂಪಡಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಮಹಿಳೆಯಿಂದಲೂ ರೋಗ ಇನ್ನಿತರರಿಗೆ ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿ ಸುಭಾಷ್ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದ್ದಾರೆ.