ದೆಹಲಿ ವಿಧಾನಸಭೆ ಫಲಿತಾಂಶ- 56 ಕ್ಷೇತ್ರಗಳಲ್ಲಿ ಭಾರಿ ಮುನ್ನಡೆ ಸಾಧಿಸಿದ ಆಮ್ ಆದ್ಮಿ ಪಕ್ಷ…

190
firstsuddi

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಮ್ ಆದ್ಮಿ ಪಕ್ಷ ಭಾರಿ ಮುನ್ನಡೆ ಸಾಧಿಸಿದೆ. ನಗರದ 21 ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, 70 ಕ್ಷೇತ್ರಗಳ ಪೈಕಿ 56 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಕೇವಲ 14 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದ್ದು, ಕಾಂಗ್ರೆಸ್ ಇನ್ನು ತನ್ನ ಖಾತೆಯನ್ನು ತೆರೆದಿಲ್ಲ. ಕ್ಷಣಕ್ಷಣಕ್ಕೂ ಫಿತಾಂಶದಲ್ಲಿ ಬದಲಾವಣೆ ಕಾಣುತ್ತಿದ್ದು, ಈ ಬಾರಿಯೂ ಆಮ್ ಆದ್ಮಿ ಪಕ್ಷ ಗೆಲ್ಲುವ ವಿಶ್ವಾಸದಲ್ಲಿದೆ.