ಜಮ್ಮು ಕಾಶ್ಮೀರದಲ್ಲಿ ಎನ್‍ಕೌಂಟರ್-ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ…

379
firstsuddi

ಪೂಂಚ್ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ಭಾಗದ ಮೆಂಧಾರ್ ಪ್ರದೇಶದಲ್ಲಿ ಪಾಕ್ ಸೇನೆ ಕಳೆದ ಕೆಲವು ದಿನಗಳಿಂದ ಕದನ ವಿರಾಮ ಉಲ್ಲಂಘನೆ ನಡೆಸುತ್ತಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಈ ವೇಳೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.