ಬೀಜಿಂಗ್ : ಚೀನಾದಲ್ಲಿ ಮಾರಣಾಂತಿಕ ಕೊರೊನಾ ವೈರಸ್‍ಗೆ ಬಲಿಯಾಗುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೊರೊನಾ ವೈರಸ್‍ಗೆ ಬಲಿಯಾದವರ ಸಂಖ್ಯೆ 1100 ರ ಗಡಿ ದಾಟಿದೆ. ಒಂದು ದಿನಕ್ಕೆ 100 ಮಂದಿ ಈ ಮಹಾಮಾರಿ ಸೋಂಕಿಗೆ ಬಲಿಯಾಗುತ್ತಿದ್ದು, ಹೊಸದಾಗಿ 1638 ಮಂದಿಗೆ ಸೋಂಕು ಕಾಣಿಸಿಕೊಂಡಿರುವುದಾಗಿ ತಿಳಿದು ಬಂದಿದ್ದು, ಈ ವರೆಗೆ 33,400 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.










