ಯಾದಗಿರಿ : ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಹಪುರ ತಾಲ್ಲೂಕಿನ ಭೀಮರಾಯನ ಗುಡಿ ಬಳಿ ನಡೆದಿದೆ. ಬಸ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್‍ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆಗೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಈ ಕುರಿತು ಭೀಮರಾಯ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










