ಶ್ರೀನಗರ : ಜಮ್ಮು-ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆ “ಅನ್ಸರ್ ಘಾಜ್ವಾ ಉಲ್ ಹಿಂದ್” ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಕೆಲ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದು ಭಾರತೀಯ ಸೇನೆ, ಸಿಆರ್ಪಿಎಫ್ ಹಾಗೂ ಜಮ್ಮು-ಕಾಶ್ಮೀರಾದ ಪೊಲೀಸರು ಸೇರಿ ನಿನ್ನೆ ರಾತ್ರಿಯಿಂದಲೇ ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಂದು ಬೆಳಗ್ಗಿನ ಜಾವ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










