ಹಾಸನ : ತುಂಬು ಗರ್ಭಿಣಿಯೊಬ್ಬರು ಕೆ.ಎಸ್.ಆರ್.ಟಿ.ಸಿ ಬಸ್ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಷಹೀನಾ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ. ಹುಬ್ಬಳ್ಳಿ ಮೂಲದ ಷಹೀನಾ ಅವರು ನಿನ್ನೆ ತನ್ನ ಪೋಷಕರೊಂದಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಹಾಸನದ ಬಸ್ ನಿಲ್ದಾಣದ ಬಳಿ ಷಹೀನಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಸ್ವಲ್ಪ ಸಮಯದ ಬಳಿಕ ಷಹೀನಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೂಡಲೇ ಬಸ್ ಚಾಲಕ ಹಾಗೂ ನಿರ್ವಾಹಕ ಸ್ವಲ್ಪ ಸಮಯ ಬಸ್ನ್ನು ಬಸ್ ನಿಲ್ದಾಣದಲ್ಲೇ ನಿಲ್ಲಿಸಿ ಮಹಿಳೆಗೆ ಹೊಸ ಪಂಚೆ ಹಾಗೂ ಬಟ್ಟೆ ಕೊಡಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದು, ಬಳಿಕ ಆಂಬುಲೆನ್ಸ್ ಗೆ ಕರೆ ಮಾಡಿ ತಾಯಿ-ಮಗುವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.










