ಮಹಾಶಿವರಾತ್ರಿ ಅಂಗವಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ 300 ವಿಶೇಷ ಹೆಚ್ಚುವರಿ ಬಸ್ ಸೇವೆ…

145
firstsuddi

ಬೆಂಗಳೂರು : ಮಹಾಶಿವರಾತ್ರಿ ಅಂಗವಾಗಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಫೆ.20 ಮತ್ತು 21ರಂದು ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚುವರಿಯಾಗಿ 300 ವಿಶೇಷ ಬಸ್ ಸೇವೆಯನ್ನು ಒದಗಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಹಾಸನ, ಮಂಗಳೂರು, ಶಿವಮೊಗ್ಗ ರಾಯಚೂರು, ಕಲಬುರಗಿ, ಧರ್ಮಸ್ಥಳ, ಬಳ್ಳಾರಿ, ಕೊಪ್ಪಳ, ಬೀದರ್, ಯಾದಗಿರಿ, ಕುಕ್ಕೆ ಸುಬ್ರಹ್ಮಣ್ಯ, ಶಿರಸಿ, ಬೆಳಗಾವಿ, ಗೋಕರ್ಣ, ಧಾರವಾಡ, ಹುಬ್ಬಳ್ಳಿ, ತಿರುಪತಿ, ಶೃಂಗೇರಿ, ಹೊರನಾಡು, ವಿಜಯಪುರ, ಕಾರವಾರ ಸೇರಿದಂತೆ ವಿವಿಧ ಸ್ಥಳಗಳಿಗೆ ವಿಶೇಷ ಬಸ್‍ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗಿದೆ. ಮೈಸೂರು ಮಾರ್ಗದ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಪರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‍ಗಳು ಸಂಚರಿಸಲಿವೆ.
ಆದರೆ, ಮತ್ತೊಂದೆಡೆ ಕೆ.ಎಸ್.ಆರ್.ಟಿ.ಸಿ ಸೇರಿದಂತೆ ಸಾರಿಗೆ ನಿಗಮಗಳ ನೌಕರರು ಫೆ.20ರಂದು ಬಂದ್‍ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಕಾಣಬಹುದು ಎಂದು ನಿರೀಕ್ಷಿಸಲಾಗಿದೆ.