ಬೀಜಿಂಗ್ : ಚೀನಾದ ವುಹಾನ್‍ನಲ್ಲಿ ಮಾರಣಾಂತಿಕ ಕೊರೊನಾ ವೈರಸ್‍ಗೆ(ಕೋವಿಡ್-19) ಬಲಿಯಾದವರ ಸಂಖ್ಯೆ 2100ಕ್ಕೆ ಏರಿಕೆಯಾಗಿದೆ. ವುಹಾನ್ ಸೇರಿದಂತೆ ವಿವಿಧ ಪ್ರಾಂತ್ಯಗಳಲ್ಲಿ ಈ ವೈರಸ್ ತನ್ನ ಅಟ್ಟಹಾಸವನ್ನು ಮೆರೆದಿದ್ದು, ನಿನ್ನೆ ಒಂದೇ ದಿನದಲ್ಲಿ 1750 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ ಹೊಸದಾಗಿ 75 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿರುವುದಾಗಿ ದೃಢಪಟ್ಟಿದೆ.










