ಕಮಲ್ ಹಾಸನ್ ಅಭಿನಯಿಸುತ್ತಿರುವ ಇಂಡಿಯನ್-2 ಸೆಟ್‍ನಲ್ಲಿ ಕ್ರೇನ್ ಅಪಘಾತ-ಮೂವರ ಸಾವು…

208
firstsuddi

ಚೆನ್ನೈ : ತಮಿಳು ನಟ ಕಮಲ್ ಹಾಸನ್ ಅವರು ಅಭಿನಯಿಸುತ್ತಿರುವ ಬಹುನಿರೀಕ್ಷಿತ ಚಿತ್ರ ಇಂಡಿಯನ್-2 ಸಿನಿಮಾ ಚಿತ್ರೀಕರಣದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ರೇನ್ ಉರುಳಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಚೆನ್ನೈನ ಇವಿಪಿ ಫಿಲ್ಮ್ ಸಿಟಿಯಲ್ಲಿ ನಡೆದಿದೆ. ಮೃತರನ್ನು ಸಹ ನಿರ್ದೇಶಕ ಕೃಷ್ಣಾ(34) ಚಂದ್ರನ್(60) ಹಾಗೂ ಮಧು(29) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಇವಿಪಿ ಫಿಲ್ಮ್ ಸಿಟಿಯಲ್ಲಿ ನಿರ್ದೇಶಕ ಶಂಕರ್ ಅವರು ನಿರ್ದೇಶಿಸುತ್ತಿರುವ ಇಂಡಿಯನ್-2 ಚಿತ್ರೀಕರಣಕ್ಕಾಗಿ ಸೆಟ್ ತಯಾರಿಸಲು ಕ್ರೇನ್‍ನ್ನು ಬಳಸಲಾಗುತ್ತಿತ್ತು. ಈ ವೇಳೆ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.