ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಿರ್ಭಯಾ ಅತ್ಯಾಚಾರಿಯಿಂದ ಹೊಸ ತಂತ್ರ…

665
firstsuddi

ನವದೆಹಲಿ : ನಿರ್ಭಯಾ ಅತ್ಯಾಚಾರಿಗಳಿಗೆ ವಿಧಿಸಿದ ಗಲ್ಲುಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಿರ್ಭಯಾ ಅತ್ಯಾಚಾರಿಗಳಿಗೆ ದೆಹಲಿಯ ನ್ಯಾಯಾಲಯ ನೀಡಿದ ಅವಧಿ ಮುಗಿಯುತ್ತಿದ್ದಂತೆ ಸುಪ್ರೀಂ ಕೋರ್ಟ್ ಮಾರ್ಚ್.3ರಂದು ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಹೊಸ ಡೆತ್ ವಾರೆಂಟ್ ಜಾರಿ ಮಾಡಿತ್ತು. ಆದರೆ ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅತ್ಯಾಚಾರಿಗಳು ಜೈಲಿನಲ್ಲೇ ಹೊಸ ತಂತ್ರವನ್ನು ಹೂಡಿದ್ದು, ನಾಲ್ವರು ಆರೋಪಿಗಳ ಪೈಕಿ ವಿನಯ್ ಶರ್ಮಾ ಎಂಬುವವರು ಫೆ.16ರಂದು ಜೈಲಿನ ಗೋಡೆಗೆ ತಲೆಯನ್ನು ಚಚ್ಚಿಕೊಂಡಿದ್ದಾರೆ. ಅಲ್ಲದೇ ವಿನಯ್ ಶರ್ಮಾ ಒಬ್ಬ  ಮಾನಸಿಕ ಅಸ್ವಸ್ಥನಾಗಿದ್ದು, ಅವನ ತಾಯಿಯನ್ನು ಗುರುತಿಸಲು ಅವನಿಗೆ ಸಾಧ್ಯವಾಗುತ್ತಿಲ್ಲ ಹೀಗಾಗಿ ಅವನಿಗೆ ಗಲ್ಲುಶಿಕ್ಷೆ ವಿಧಿಸಬಾರದು ಎಂದು ಆರೋಪಿ ಪರ ವಕೀಲರು ನ್ಯಾಯಾಲಯದಲ್ಲಿ ತಿಳಿಸಿದ್ದು, ಬಳಿಕ ನ್ಯಾಯಾಲಯವು ಆರೋಪಿಯನ್ನು ಚಿಕಿತ್ಸೆಗೆ ಒಳಪಡಿಸುವಂತೆ ತಿಳಿಸಿ ಗಲ್ಲುಶಿಕ್ಷೆ ತಡೆ ವಿಚಾರವನ್ನು ಕೈಬಿಟ್ಟಿದೆ ಎನ್ನಲಾಗಿದೆ.