ಪಾಕ್ ಪರ ಘೊಷಣೆ ಕೂಗಿದ ಯುವತಿಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕಿತ್ತು : ಡಿ.ಕೆ. ಶಿವಕುಮಾರ್.

465
firstsuddi

ಬೆಂಗಳೂರು : ಪಾಕ್ ಪರ ಘೊಷಣೆ ಕೂಗಿದ ಯುವತಿಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕಿತ್ತು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಿನ್ನೆ ಫ್ರೀಡಂ ಪಾರ್ಕ್‍ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನಾ ಎಂಬ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಯುವತಿಯ ಭಾಷಣವನ್ನು ನಾನು ನೋಡಿದ್ದೇನೆ. ಅದರಲ್ಲಿ ಅವಳು ಈಗ ಹೇಳಿರುವ ಮಾತನ್ನು ಕೇಳಿರಲಿಲ್ಲ. ಅಮೂಲ್ಯಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕಿತ್ತು. ಆದರೆ ಮಧ್ಯದಲ್ಲಿ ಏನೋ ಸಮಸ್ಯೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ನನಗೆ ಕೆಲವು ಸ್ಪಷ್ಟನೆಗಳು ಬೇಕಾಗಿದೆ. ಹೀಗಾಗಿ ನಾನು ಈ ಕುರಿತು ಹೆಚ್ಚಾಗಿ ಪ್ರತಿಕ್ರಯಿಸುವುದಿಲ್ಲ ಎಂದರು.