ಶ್ರೀನಗರ : ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರಾದ ಅನಂತ್‍ನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ ಕಳೆದ ರಾತ್ರಿ ಭಾರತೀಯ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರ ಬಳಿಯಿದ್ದ ಮದ್ದುಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರಾದ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.










