ತವರು ಮನೆಗೆ ಹೋಗಲು ಬಿಡದ ಗಂಡನ ಮರ್ಮಾಂಗವನ್ನೇ ಕತ್ತರಿಸಿದ ಹೆಂಡತಿ…!

1085

ಜಾರ್ಖಂಡ್ : ತಾಯಿಯ ಮನೆಗೆ ಹೋಗಲು ಬಿಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ತನ್ನ ಪತಿಯ ಮರ್ಮಾಂಗವನ್ನೇ ಕತ್ತರಿಸಿರುವ ಧಾರುಣ ಘಟನೆ ಜಾರ್ಖಂಡ್‍ನ ಗಿರಿಹಿಡ್ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಜನವರಿ ತಿಂಗಳಿನಲ್ಲಿ ಮದುವೆಯಾದ ಇಬ್ಬರ ನಡುವೆ ಪ್ರತಿದಿನ ಜಗಳವಾಗುತ್ತಿತ್ತು. ಈ ಕುರಿತು ಗ್ರಾಮಸ್ಥರು ರಾಜಿ ಪಂಚಾಯಿತಿ ನಡೆಸಿ ಒಂದಾಗಿ ಜೀವನ ನಡೆಸುವಂತೆ ಹೇಳಿದ್ದರು ಎನ್ನಲಾಗಿದ್ದು, ಕಳೆದ ಎರಡು ದಿನಗಳ ಹಿಂದೆಯಷ್ಟೇ ತವರು ಮನೆಯಿಂದ ಬಂದ ಪತ್ನಿ ಮತ್ತೆ ನಾನು ತವರು ಮನೆಗೆ ಹೋಗುತ್ತೇನೆ ಎಂದು ಹಠ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿ ಪತ್ನಿ ತನ್ನ ಪತಿಯ ಖಾಸಗಿ ಅಂಗದ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಪತಿಯನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರ ವಿಚಾರಣೆ ವೇಳೆ ಪತ್ನಿ ತನ್ನ ಖಾಸಗಿ ಅಂಗವನ್ನು ಕತ್ತರಿಸಿರುವುದಾಗಿ ಪತಿ ಒಪ್ಪಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.