ಧಾರವಾಡ : ಹುಬ್ಬಳ್ಳಿಯಲ್ಲಿ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಪಾಕ್ ಪರ ಘೋಷಣೆ ಪ್ರಕರಣ ಮಾಸುವ ಮುನ್ನವೇ ಈಗಾ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಸರ್ಕಾರಿ ಶಾಲೆಯ ಗೋಡೆಯ ಮೇಲೆ ದುಷ್ಕರ್ಮಿಗಳು ಪಾಕ್ ಪರ ಬರಹವನ್ನು ಬರೆದಿದ್ದಾರೆ. ತಾಲ್ಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯ ಗೋಡೆಯಲ್ಲಿ ದುಷ್ಕರ್ಮಿಗಳು ಪಾಕಿಸ್ತಾನ ಜಿಂದಾಬಾದ್ ಹಾಗೂ ಟಿಪ್ಪು ಸುಲ್ತಾನ್ ಶಾಲೆ ಎಂದು ಬರೆದಿದ್ದು, ಈ ಕುರಿತು ಶಾಲಾ ಆಡಳಿತ ಮಂಡಳಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರನ್ನು ದಾಖಲಿಸಿದ್ದು, ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.











