ಹಾಸನ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು…

154
firstsuddi

ಹಾಸನ : ಎರಡು ಕಂಟೈನರ್ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಬಳಿ ನಡೆದಿದೆ. ದಿಲೀಪ್ ಗೌಡ(25) ಹಾಗೂ ಚಂದ್ರಶೇಖರ್(36) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಎರಡು ಕಂಟೈನರ್ ಲಾರಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಚಾಲಕರ ಮೃತದೇಹಗಳು ಪತ್ತೆ ಹಚ್ಚಲು ಸಾಧ್ಯವಾಗದಷ್ಟು ಛಿದ್ರವಾಗಿದ್ದು, ಘಟನಾ ಸ್ಥಳಕ್ಕೆ ಆಲೂರು ಠಾಣಾ ಪೊಲೀಸರು ಭೇಟಿ ನೀಡಿ ಲಾರಿ ಒಳಗೆ ಸಿಲುಕಿರುವ ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ. ರಸ್ತೆ ಅಗಲೀಕರಣಕ್ಕಾಗಿ ರಸ್ತೆಯ ಒಂದು ಬದಿ ಮಣ್ಣನ್ನು ದಟ್ಟವಾಗಿ ಸೇರಿಸುವುದರಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.