ಸಚಿವ ಸಿ.ಟಿ. ರವಿ ಅವರ ವಿರುದ್ಧ ಕಾಂಗ್ರೆಸ್ ಧರಣಿ…

195
firstsuddi

ಬೆಂಗಳೂರು : ಕ್ಯಾಸಿನೋ ಬೆಂಬಲಿಸಿ ಸಚಿವ ಸಿ.ಟಿ. ರವಿ ಅವರು ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ವಿನೂತನವಾಗಿ ಪ್ರತಿಭಟನೆ ನಡೆಸಿದೆ. ನಗರದ ಕಾಂಗ್ರೆಸ್ ಭವನದ ಮುಂದೆ ಕಾಂಗ್ರೆಸ್ ಮುಖಂಡರು ಮುಖಕ್ಕೆ ಸಿ.ಟಿ. ರವಿ ಅವರ ಮುಖವಾಡವನ್ನು ಧರಿಸಿ ರಸ್ತೆ ಮಧ್ಯೆ ಇಸ್ಪೀಟ್ ಹಾಗೂ ಬ್ರೇಕ್ ಡ್ಯಾನ್ಸ್ ಅಣಕು ಪ್ರದರ್ಶನ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೋ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಅದಕ್ಕೆ ಪೂರಕವೆಂಬಂತೆ ಸಚಿವ ಸಿ.ಟಿ. ರವಿ ಅವರು ಹೇಳಿಕೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕ್ಯಾಸಿನೋ ಸೆಂಟರ್ ತೆರೆಯುವ ಪ್ರಸ್ತಾಪ ಜಾರಿಗೆ ತರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.