ನಟ ರಕ್ಷಿತ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ…

222
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ವಿರುದ್ಧ 9ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ರಕ್ಷಿತ್ ಶೆಟ್ಟಿ ಅವರು ಅಭಿನಯದ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಅನುಮತಿ ಪಡೆಯದೇ ಶಾಂತಿಕ್ರಾಂತಿ ಚಿತ್ರದ ‘ಮಧ್ಯ ರಾತ್ರೀಲಿ, ಹೈವೇ ರಸ್ತೇಲಿ’ ಹಾಡಿನ ಸಂಗೀತವನ್ನು ಬಳಸಲಾಗಿದೆ ಎಂದು ಆರೋಪಿಸಿ 2017ರ ಜನವರಿಯಲ್ಲಿ ರಕ್ಷಿತ್ ಶೆಟ್ಟಿ ಒಡೆತನದ ಪರಮ್ವಹ ಸ್ಟುಡೀಯೋಸ್ ವಿರುದ್ಧ ಲಹರಿ ಆಡಿಯೋ ಕೃತಿಚೌರ್ಯದ ಪ್ರಕರಣವನ್ನು ದಾಖಲಿಸಿತ್ತು. ಈ ಪ್ರಕರಣದ ವಿಚಾರಣೆಗೆ ರಕ್ಷಿತ್ ಶೆಟ್ಟಿ ಹಾಗೂ ಅಜನೀಶ್ ಲೋಕನಾಥ್ ಅವರು ಪದೇ ಪದೇ ಗೈರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ 9ನೇ ಎಸಿಎಂಎಂ ನ್ಯಾಯಾಲಯವು ರಕ್ಷಿತ್ ಶೆಟ್ಟಿ ಹಾಗೂ ಅಜನೀಶ್ ಲೋಕನಾಥ್ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಒಂದು ವೇಳೆ ಇಬ್ಬರು ವಿಚಾರಣೆಗೆ ಹಾಜರಾಗದೆ ಇದ್ದರೆ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.