ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ…

353
firstsuddi

ಮೈಸೂರು : ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ತಡರಾತ್ರಿ ಮನೆಯಲ್ಲಿ ಇರುವಾಗ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಕುಟುಂಬಸ್ಥರು ಕೂಡಲೇ ಅರ್ಜುನ್ ಜನ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಈಗಾ ಅರ್ಜುನ್ ಜನ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಜುನ್ ಜನ್ಯ ಅವರು ಹಲವು ಸಿನಿಮಾಗಳಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಸಂಗೀತ ನಿರ್ದೇಶನದ ಜೊತೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಗುರುತಿಸಿಕೊಂಡಿದ್ದು, ಅರ್ಜುನ್ ಜನ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.