ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲ ಸೋಮೇಶ್ವೆ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿ ಮೂಲದ ಸಮ್ಮದ್ ರಾಯಗೌಡ(23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಬಿ.ಇ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಮ್ಮದ್ ರಾಯಗೌಡ ಅವರು ರೈಲ್ವೇ ನಿಲ್ದಾಣದಲ್ಲಿ ರೈಲು ಬರುವುದಕ್ಕೂ ಮೊದಲೇ ಬಂದು ಕುಳಿತಿದ್ದರು. ಬಳಿಕ ರೈಲು ಬುರುತ್ತಿದ್ದಂತೆ ರೈಲಿನ ಅಡಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು ಹಾಗೂ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










