ಮಹದಾಯಿ ಅಧಿಸೂಚನೆ- ಇದು ಕೇವಲ ಉತ್ತರ ಕರ್ನಾಟಕದ ಜನತೆಗೆ ಮಾತ್ರವಲ್ಲದೆ ಇಡೀ ರಾಜ್ಯದ ಜನತೆಗೆ ಸಂದ ಜಯ : ಜಗದೀಶ್ ಶೆಟ್ಟರ್.

164
firstsuddi

ಹುಬ್ಬಳ್ಳಿ : ಕೇಂದ್ರ ಸರ್ಕಾರ ಮಹದಾಯಿ ಅಧಿಸೂಚನೆಯನ್ನು ಹೊರಡಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹದಾಯಿ ಅಧಿಸೂಚನೆಯನ್ನು ಹೊರಡಿಸಿರುವುದು ಸ್ವಾಗತಾರ್ಹವಾಗಿದ್ದು, ಇದು ಕೇವಲ ಉತ್ತರ ಕರ್ನಾಟಕದ ಜನತೆಗೆ ಮಾತ್ರವಲ್ಲದೆ ಇಡೀ ರಾಜ್ಯದ ಜನತೆಗೆ ಸಂತೋಷ ತಂದಿದೆ. ಬಹಳ ದಿನಗಳ ಹೋರಾಟಕ್ಕೆ ಇದು ಜಯ ಸಿಕ್ಕಿದಂತಾಗಿದೆ. ಕಳೆದ ಎರಡು ದಿನಗಳ ಹಿಂದೆ ರಾಜ್ಯ ಹಾಗೂ ಕೇಂದ್ರ ಸಚಿವರು ಸೇರಿ ಕೇಂದ್ರ ನೀರಾವರಿ ಸಚಿವರಾದ ಶೇಕಾವತ್ ಅವರನ್ನು ಭೇಟಿಯಾಗಿ ಮಾತನಾಡಿದ್ದೆವೆ. ಅವರು ಕೂಡಾ ಭರವಸೆಯನ್ನು ನೀಡಿದರು. ಆ ಭರವಸೆಯಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಬಹಳ ಖುಷಿಯಾಗಿದೆ ಎಂದರು.