ಚಿಕ್ಕಬಳ್ಳಾಪುರ : ಜನ್ಮದಿನಕ್ಕೆ ಪ್ರಿಯತಮೆ ಶುಭಕೊರಲಿಲ್ಲ ಎಂದು ಮನನೊಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(25) ಆತ್ಮಹತ್ಯೆಗೆ ಶರಣಾದ ಯುವಕ. ಶಿವಕುಮಾರ್ ಹಾಗೂ ಬೆಂಗಳೂರು ಮೂಲದ ಯುವತಿ ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಯುವತಿ ಕೆಲ ದಿನಗಳಿಂದ ಶಿವಕುಮಾರ್ ಅವರೊಂದಿಗೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಬಳಿಕ ಫೆ.26ರಂದು ಶಿವಕುಮಾರ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆ, ಇಂದಾದರೂ ಯುವತಿ ಕರೆ ಮಾಡಿ ಶುಭಕೋರಬಹುದು ಎಂದು ಕಾಯುತ್ತಿದ್ದರು. ಆದರೆ ಪ್ರಿಯತಮೆ ಶುಭ ಕೋರದೆ ಇದ್ದ ಕಾರಣ ಮನನೊಂದ ಪ್ರಿಯಕರ ಮನೆಯಲ್ಲಿ ಯಾರು ಇಲ್ಲದ ವೇಳೆ ನನ್ನ ಸಾವಿಗೆ ಯಾರು ಕಾರಣರಲ್ಲ, ಯುವತಿಯು ಕಾರಣವಲ್ಲ ಎಂದು ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.










