ನಿರ್ಭಯಾ ಪ್ರಕರಣ : ಪವನ್ ಗುಪ್ತಾ ಸಲ್ಲಿಸಿದ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಂದ ತಿರಸ್ಕೃತ-ನಾಳೆ ನಾಲ್ವರು ಆರೋಪಿಗಳಿಗೆ ಗಲ್ಲು ಫಿಕ್ಸ್…!

457
firstsuddi

ನವದೆಹಲಿ : ನಿರ್ಭಯಾ ಪ್ರಕರಣದ ಆರೋಪಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಿರಸ್ಕರಿಸಿದ್ದು, ಈ ಮೂಲಕ ಅತ್ಯಾಚಾರಿಗಳಿಗೆ ಗಲ್ಲು ಖಾಯಂ ಆಗಿದೆ. ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳಿಗೆ ಮಾ.3ರಂದು ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ನಾನಾ ರೀತಿಯ ಕಸರತ್ತನ್ನು ಮಾಡಿದ್ದರು. ಇಂದು ಕೂಡಾ ಆರೋಪಿಗಳಲ್ಲಿ ಒಬ್ಬನಾದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ವಜಾಗೊಳಿಸುತ್ತಿದ್ದಂತೆ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದರು. ಈಗಾ ರಾಷ್ಟ್ರಪತಿಗಳು ಆರೋಪಿ ಸಲ್ಲಿಸಿದ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದು, ಈ ಮೂಲಕ ನಿರ್ಭಯಾ ಪ್ರಕರಣದ ನಾಲ್ವರು ಆರೋಪಿಗಳ ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳು ಮುಕ್ತಾಯವಾಗಿದ್ದು, ಹೀಗಾಗಿ ನಾಲ್ವರು ಆರೋಪಿಗಳಿಗೆ ನಾಳೆ ಗಲ್ಲುಶಿಕ್ಷೆ ಖಾಯಂ ಆಗಿದೆ.