ಮೈಸೂರು : 20 ವರ್ಷದ ಯುವತಿಯೊಂದಿಗೆ ಕಾಮದಾಟ ನಡೆಸಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ರಾಂಪುರ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದರಾಜು ಅವರು ತನ್ನ ಹಳೆಯ ವಿದ್ಯಾರ್ಥಿನಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿಕೊಂಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಹಿನ್ನೆಲೆ ಶಿಕ್ಷಕನನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಇಲ್ಲವೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳ ಪೋಷಕರು ನಿನ್ನೆ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು. ಅದರಂತೆ ನಂಜನಗೂಡು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್ ರಾಜ ಅವರು ಕಾಮುಕ ಶಿಕ್ಷಕ ಸಿದ್ದರಾಜು ಅವರನ್ನು ಅಮಾನತುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ.










