ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ-ಚಿಕ್ಕಮಗಳೂರಿನ ರೆಸಾರ್ಟ್‍ವೊಂದರಲ್ಲಿ ಶಾಸಕರ ವಾಸ್ತವ್ಯ…

346
firstsuddi

ನವದೆಹಲಿ : ಕನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಮೈತ್ರಿ ಸರ್ಕಾರವನ್ನು ಪತನಗೊಳಿಸಿದಂತೆ ಮಧ್ಯಪ್ರದೇಶದಲ್ಲೂ ತಡರಾತ್ರಿ ಆಪರೇಷನ್ ಕಮಲ ಆರಂಭಗೊಂಡಿದ್ದು, ಕಾಂಗ್ರೆಸ್‍ನ ಒಟ್ಟು 12ಮಂದಿ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಇವರಲ್ಲಿ 8 ಮಂದಿ ಶಾಸಕರು ದೆಹಲಿಗೆ ಶಿಫ್ಟ್ ಆಗಿದ್ದು, ಇನ್ನುಳಿದ ನಾಲ್ಕು ಮಂದಿ ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪ್ರತಿಕ್ರಯಿಸಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‍ನಾಥ್ ಅವರು ನಮ್ಮ ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಎಲ್ಲಾ ಶಾಕರು ವಾಪಸ್ ಆಗುತ್ತಾರೆ ಎಂದು ಹೇಳಿದ್ದಾರೆ. ಅಲ್ಲದೇ ಹರಿಯಾಣದ ಗುರುಗ್ರಾಮದಲ್ಲಿರುವ ಐಟಿಸಿ ರೆಸಾರ್ಟ್‍ನಲ್ಲಿ ಬಿಜೆಪಿ ಬಲವಂತವಾಗಿ ಶಾಸಕರನ್ನು ಕೂಡಿ ಹಾಕಲಾಗಿದೆ. ಗುರುಗ್ರಾಮದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವುದರಿಂದ ಶಾಸಕರನ್ನು ಬೇಟಿಯಾಗಲು ಬಿಡುತ್ತಿಲ್ಲ. ಶಾಸಕರಿಗೆ 30 ಕೋಟಿ ಹಣ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್ಪಿ 2, ಎಸ್ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.