ಟಿ-20 ವಿಶ್ವಕಪ್- ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಭಾರತ ತಂಡ…

261
firstsuddi

ಸಿಡ್ನಿ : ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಫೈನಲ್ ಪ್ರವೇಶಿಸಿದೆ. ಇಂದು ಬೆಳಿಗ್ಗೆ 9:30 ಕ್ಕೆ ಆರಂಭಗೊಳ್ಳಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿ ಫೈನಲ್ ಪಂದ್ಯ ಬಾರಿ ಮಳೆಯಿಂದ ರದ್ದುಗೊಳಿಸಲಾಗಿದ್ದು, ಈ ಹಿನ್ನೆಲೆ ಭಾರತ ಮಹಿಳಾ ಕ್ರಿಕೆಟ್ ತಂಡ ಅಂಕ ಪಟ್ಟಿ ಮತ್ತು ನೆಟ್ ರನ್ ರೇಟ್ ಆಧಾರದ ಮೇಲೆ ಫೈನಲ್ ಪ್ರವೇಶಿಸಿದೆ. ಭಾರತ ಮಹಿಳಾ ತಂಡ  ಟಿ-20 ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಗೆಲುವಿನ ನಿರೀಕ್ಷೆಯಲ್ಲಿದೆ. ಲೀಗ್ ಹಂತದ ಎಲ್ಲಾ 4 ಪಂದ್ಯಗಳನ್ನು ಗೆದ್ದು ಭಾರತ 8 ಅಂಕವನ್ನು ಪಡೆದುಕೊಂಡು ಅಗ್ರಸ್ಥಾನವನ್ನು ಪಡೆದುಕೊಂಡಿತ್ತು. ಅಲ್ಲದೇ ಇಂದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ಎರಡನೇ ಸೆಮಿ ಫೈನಲ್ ಪಂದ್ಯ ನಡೆಯಲಿದ್ದು, ಒಂದು ವೇಳೆ ಆ ಪಂದ್ಯವು ಮಳೆಯಿಂದ ರದ್ದಾದರೆ ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶಿಸಲಿದೆ.