ಬೆಂಗಳೂರು : ಮುಖ್ಯಮಂತ್ರಿ, ಹಣಕಾಸು ಸಚಿವರಾದ ಬಿ.ಎಸ್. ಯಡಿಯೂರಪ್ಪ ಅವರು 2020ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ರೈತರಿಗೆ ಮೀಸಲಿಡಲಾದ ಬಜೆಟ್ನ ಮುಖ್ಯಾಂಶಗಳು ಈ ಕೆಳಕಂಡಂತಿದೆ.
• ನೀರಿನ ಭದ್ರತೆ, ಭೂ ಸಂಚಯ ಮತ್ತು ಸಾಮೂಹಿಕ ಕೃಷಿ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆಗೆ ಉತ್ತೇಜನ ನೀಡಲು ಮತ್ತು ಕೃಷಿ ಹಾಗೂ ತೋಟಗಾರಿಕೆ ಉದ್ದಿಮೆಯಾಗಿ ಪರಿಗಣಿಸಲು ಹೊಸ ಕೃಷಿ ನೀತಿ ಅನುಷ್ಠಾನ.
• “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ” ಫಲಾನುಭವಿಗಳಿಗೆ ರಾಜ್ಯ ಸರ್ಕಾರ 4000 ರೂ. ಹೆಚ್ಚುವರಿ ನೆರವು ನೀಡುವ ಯೋಜನೆಯನ್ನು ಮುಂದುವರೆಸಲು 2600 ಕೋಟಿ ರೂ. ಅನುದಾನ.
• ಎಲ್ಲಾ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ.
• ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು ಬಿಡುಗಡೆಗೆ 900 ಕೋಟಿ ರೂ.
• ರೈತ ಸಿರಿ ಯೋಜನೆಯಡಿ ಟೆಫ್, ಚಿಯಾ ಮತ್ತು ಕ್ವಿನೋವಾ ಸಿರಿಧಾನ್ಯಗಳ ಸೇರ್ಪಡೆ.
• ಮಣ್ಣು, ನೀರು ಪರೀಕ್ಷೆ ಮತ್ತು ರೈತರಿಗೆ ತಾಂತ್ರಿಕ ನೆರವು ನೀಡಲು ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಪ್ರಾರಂಭ.
• ಸಾವಯವ ಕೃಷಿ ಪ್ರೋತ್ಸಾಹಕ್ಕೆ 200 ಕೋಟಿ ರೂ. ಅನುದಾನ
• ರೈತರಿಗೆ ಪ್ರದೇಶವಾರು ಸೂಕ್ತ ಬೆಳೆಯನ್ನು ಬೆಳೆಯಲು, ಅಗತ್ಯ ಬೀಜಗಳು, ರಸಗೊಬ್ಬರಗಳು, ಸಣ್ಣ ಪೌಷ್ಠಿಕಾಂಶಗಳ ಬಳಕೆಗೆ ಮಾರ್ಗದರ್ಶನ ನೀಡಲು ಹೊಸ ನೀತಿ ರಚನೆ.
• ರೈತರ ಸಾಮಥ್ರ್ಯ ಅಭಿವೃದ್ಧಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ 40 ಪ್ರಾತ್ಯಕ್ಷಿಕೆ ಕ್ಷೇತ್ರಗಳ ಅಭಿವೃದ್ಧಿ.
• ವಿಶ್ವಬ್ಯಾಂಕ್ ಪ್ರಾಯೋಜಿತ ಸುಜಲಾ-III ಯೋಜನೆಯನ್ನು ಜಾರಿಗೊಳಿಸಿರುವ 12 ಮಳೆ ಆಶ್ರಿತ ಜಿಲ್ಲೆಗಳ 2500 ಗ್ರಾಮಗಳ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ಭೂ ಸಂಪನ್ಮೂಲ ಯಾದಿಯ ತರಬೇತಿ ನೀಡಿ, ಕಾರ್ಡ್ ವಿತರಿಸಲು 10 ಕೋಟಿ ರೂ. ಅನುದಾನ.
• ಆಧುನಿಕ ಮೀನುಗಾರಿಕೆ ತಾಂತ್ರಿಕತೆಗೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ ಜಾರಿ.
• ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು 5 ಕೋಟಿ ರೂ ಅನುದಾನ.
• ಮುಲ್ಕಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.
• ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲಿ ಪರಿಷ್ಕøತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.










