ರಾಜ್ಯ ಬಜೆಟ್ – ಶಾಲಾ ಮಕ್ಕಳಿಗೆ ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ…

217
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿತೂರಪ್ಪ ಅವರು ಮಂಡಿಸಿರುವ ಬಜೆಟ್‍ನಲ್ಲಿ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಶಾಲಾ ಮಕ್ಕಳಿಗೆ ಆಯವ್ಯಯವನ್ನು ಮಂಡಿಸಿದ್ದಾರೆ.
• ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್‍ಸಿಎಸ್‍ಪಿ/ಟಿಎಸ್‍ಪಿ ಅಡಿ 26,930 ಕೋಟಿ ರೂ ಅನುದಾನ ನಿಗದಿ.
• ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೇ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಶೆ. 24 ರಷ್ಟು ಸೀಟು ಹಂಚಿಕೆ ಕ್ರಮ. ಈ ವಸತಿ ಶಲೆಗಳಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ.
• ಪರಿಶಿಷ್ಠ ಜಾತಿ ಮತ್ತು ಮತ್ತು ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ರಸ್ತೆ ಸಾರಿಗೆ ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ.
• ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಆರ್ಥಿಕ ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ ಹೆಚ್ಚಳ.
• ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ನೀಡಲು ಕ್ರಮ. 60 ಲಕ್ಷ ರೂ. ಅನುದಾನ.
• ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಸ್ಥಾಪನೆಗೆ 2 ಕೋಟಿ. ರೂ. ಅನುದಾನ.
• ‘ಚರ್ಮ ಶಿಲ್ಪ’ ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ. ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ ರೂ.ಗಳಲ್ಲಿ 5 ಲಕ್ಷ ರೂ. ಸಹಾಯಧನ. 12.50 ಕೋಟಿ ರೂ. ಅನುದಾನ.
• ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ.
• ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಯಮಗಳಿಗೆ 125 ಕೋಟಿ ರೂ. ಅನುದಾನ.
• ಇ-ವಾಣಿಜ್ಯ ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ 2.5 ಕೋಟಿ ರೂ ಆರ್ಥಿಕ ನೆರವು.
• ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.
• ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ.
• ಅಪೂರ್ಣ ಹಂತದ 2 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂ.
• ನಬಾರ್ಡ್ ಸಹಯೋಗದಲ್ಲಿ 758 ಕೊಟಿ ರೂ. ವೆಚ್ಚದಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.
• ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, ‘ಸಂಭ್ರಮ ಶನಿವಾರ’ ಆಚರಣೆ.
• ಆಯವ್ಯದಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ 37,783 ಕೋಟಿ ರೂ.ಗಳ 953 ಕಾರ್ಯಕ್ರಮಗಳ ನಿಗದಿ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ. 15.88 ರಷ್ಟು.
• ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಆಯವ್ಯಯ ಮಂಡನೆ ರಾಜ್ಯದಲ್ಲಿರುವ 18 ವರ್ಷದ ಕೆಳಗಿರುವ ಎಲ್ಲಾ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆ ಅಡಕ. 2020-21ನೇ ಸಾಲಿನ ಆಯವ್ಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ. ಇದು ಒಟ್ಟಾರೆ ಆಯವ್ಯಯ ಗಾತ್ರದ 15.28 ರಷ್ಟು.
• ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಟ್ರಾನ್ಸ್ ಜೆಂಡರ್ಸ್ ಅವರ ಮೂಲ ಹಂತದ ಸಮೀಕ್ಷೆ ಕೈಗೊಳ್ಳಲು 70 ಲಕ್ಷ ರೂ. ಅನುದಾನ.
• ‘ವನಿತಾ ಸಂಗಾತಿ’ ಯೋಜನೆಯ ಗಾರ್ಮೆಂಟ್ಸ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ.
• 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮಗಳೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ.
• ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ.