ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ…

205
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ಘೋಷಣೆ ಮಾಡಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತ ಹಾಗೂ 30 ಹಳ್ಳಿಗಳ ಪುನರ್ವಸತಿ ಹಾಗೂ ಪುನರ್ ನಿರ್ಮಾಣಕ್ಕೆ 10 ಸಾವಿರ ಕೋಟಿ ನಿಗದಿಪಡಿಸಲಾಗಿದೆ ಎಂದು ಘೋಷಣೆ ಮಾಡಿದರು. ನಿನ್ನೆ ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಕುರಿತು ಪ್ರಸ್ತಾಪವೇ ಇಲ್ಲದೇ ಇದ್ದುದರಿಂದ ಬಾರಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಬಳಿಕ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ಮೂರು ವರ್ಷದಲ್ಲಿ ಪೂರ್ಣಗೊಳಿಸಲಾಗುತ್ತದೆ. ಇಂದು ದೆಹಲಿಗೆ ತೆರಳುತ್ತಿದ್ದೇನೆ. ಕೇಂದ್ರ ಸರ್ಕಾರದ ಪ್ರಮುಖರೊಂದಿಗೆ ಚರ್ಚಿಸಿ ಹೆಚ್ಚುವರಿ ಅನುದಾನವನ್ನು ತರುವ ಪ್ರಯತ್ನ ಮಾಡುತ್ತೇನೆ ಎಂದರು.