ಕರ್ನಾಟಕದ ಮಾಜಿ ರಾಜ್ಯಪಾಲರಾದ ಹಂಸರಾಜ್ ಭಾರದ್ವಾಜ್ ವಿಧಿವಶ…

132
firstsuddi

ಬೆಂಗಳೂರು : ಕರ್ನಾಟಕದ ಮಾಜಿ ರಾಜ್ಯಪಾಲರು ಹಾಗೂ ಕಾಂಗ್ರೆಸ್‍ನ ಹಿರಿಯ ಮುಖಂಡರಾದ ಕೇಂದ್ರದ ಮಾಜಿ ಕಾನೂನು ಸಚಿವ ಹಂಸರಾಜ್ ಭಾರದ್ವಾಜ್(83) ಅವರು ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮೃತರ ಅಂತ್ಯಸಂಸ್ಕಾರವನ್ನು ಇಂದು ನಡೆಸಲಾಗುತ್ತದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. 1982ರಲ್ಲಿ ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾದ ಹಂಸರಾಜ್ ಭಾರದ್ವಾಜ್ ಅವರು ರಾಜೀವ್ ಗಾಂಧಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದರು. 2009-2014ರ ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದು, ಈ ನಡುವೆ 2012-13ರ ಅವಧಿಯಲ್ಲಿ ಕೇರಳದ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು.