ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ-ಸವಾರ ಸ್ಥಳದಲ್ಲೇ ಸಾವು…

189
firstsuddi

ಕಾಪು : ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಉದ್ಯಾವರ ನಿವಾಸಿ ಸುಧಾಕರ್(40) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಮಂಗಳೂರಿನಿಂದ ಉಡುಪಿ ಕಡೆಗ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ಮೇಲಿಂದ ಹಾರಿ ಬಂದು ಇನ್ನೊಂದು ಬದಿಯ ರಸ್ತೆಯಲ್ಲಿ ಉಡುಪಿ ಕಡೆಯಿಂದ ಕಾಪು ಕಡೆಗೆ ತೆರಳುತ್ತಿದ್ದ ಸ್ಕೂಟರ್‍ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಪು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.