ನವದೆಹಲಿ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದಾರೆ. ಜ್ಯೋತಿರಾದಿತ್ಯ ಸಿಂದಿಯಾ ಅವರು ಇಂದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬೆನ್ನಲ್ಲೇ ಕಾಂಗ್ರೆಸ್‍ಗೆ ರಾಜಿನಾಮೆ ನೀಡಿರುವುದಾಗಿ ಬಹಿರಂಗ ಪಡಿಸಿದ್ದಾರೆ. ಜ್ಯೋತಿರಾಮ್ ಸಿಂಧಿಯಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶದ 19ಮಂದಿ ಕಾಂಗ್ರೆಸ್ ಶಾಸಕರು ಕೂಡಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಈ ಬೆಳವಣಿಗೆಯಿಂದ ಮಧ್ಯಪ್ರದೇಶದ ಕಮಲ್ ನಾಥ್ ಅವರ ನೇತೃತ್ವದ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.











