ನವದೆಹಲಿ : ಐಪಿಎಲ್ ಮ್ಯಾಚ್‍ಗೂ ಕೊರೊನಾ ವೈರಸ್ ಬಿಸಿ ತಟ್ಟಿದ್ದು, ವಕೀಲ ಜಿ.ಅಲೆಕ್ಸ್ ಬೆಂಜಿಗರ್ ಅವರು ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಮದ್ರಾಸ್ ಹೈಕೋರ್ಟ್‍ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಾರಣಾಂತಿಕ ಕೊರೊನಾ ವೈರಸ್ ವಿಶ್ವದಾಧ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ, ಮಾರ್ಚ್ 29ರಿಂದ ಆರಂಭವಾಗುವ ಐಪಿಎಲ್ ಪಂದ್ಯವನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ಮಾಡಬೇಕು ಎಂದು ವಕೀಲ ಜಿ.ಅಲೆಕ್ಸ್ ಬೆಂಜಿಗರ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.










