ನವದೆಹಲಿ : ನಿನ್ನೆ ತಾನೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ಧ ಜ್ಯೋತಿರಾದಿತ್ಯ ಸಿಂದಿಯಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಹೂಗುಚ್ಚ ನೀಡಿ ಬಿಜೆಪಿ ಶಾಲನ್ನು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಇತ್ತ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜೀನಾಮೆ ನೀಡುತ್ತಿದ್ದಂತೆ ಅವರ ಆಪ್ತರಾಗಿದ್ದ 22 ಮಂದಿ ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.










