17 ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದ ಯೋಧನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ…

441
firstsuddi

ಧಾರವಾಡ : ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಮರಳಿದ ಯೋಧರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ಬಸವರಾಜ ಗಡಾದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ವಾಪಸ್ಸಾದ ಯೋಧ. ಮದ್ರಾಸ್ ರೆಜಿಮೆಂಟ್‍ನಲ್ಲಿ ಹವಾಲ್ದಾರ್ ಆಗಿದ್ದ ಯೋಧ ಬಸರಾಜು ಅವರು, ಜಮ್ಮು ಕಾಶ್ಮೀರಾದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರೊಂದಿಗೆ ಕಾದಾಟ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು. ಇದರೊಂದಿಗೆ ಜಮ್ಮು ಕಾಶ್ಮೀರ, ಸಿಯಾಚಿನ್, ಲೇಹ್, ಲಡಾಕ್ ಸೇರಿದಂತೆ ಇತರೆ ಪ್ರದೇಶಗಳಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ತವರಿಗೆ ವಾಪಸ್ಸಾದ ಬಸವರಾಜು ಅವರಿಗೆ ಶಾಲಾ ಮಕ್ಕಳು, ಬಸವರಾಜು ಅವರ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಬಸವರಾಜು ಅವರನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿದರು. ಯೋಧರ ಮೆರವಣಿಗೆಯುದ್ದಕ್ಕೂ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂಬ ದೇಶಭಕ್ತಿಯ ಘೋಷಣೆಗಳು ಕೇಳಿಬಂದಿತು.