ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ-ನಾಲ್ವರ ಸಾವು…

192
firstsuddi

ಬೆಂಗಳೂರು : ಡಿವೈಡರ್ ಹಾರಿ ಸ್ವಿಫ್ಟ್ ಡಿಸೈರ್ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿರುವ ಘಟನೆ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ. ಶಿವಕುಮಾರ್, ಕಿರಣ್, ರಶ್ಮಿ ಹಾಗೂ ಕಾವೇರಮ್ಮ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಸ್ವಿಫ್ ಕಾರು ಹಾಸನದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಯಂಟಗಾನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾರಿ ಬೆಂಗಳೂರಿನಿಂದ ಹಾಸನದ ಕಡೆ ತೆರಳುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೂ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.