ಉಡುಪಿ: ಕೋವಿಡ್- 19 ಹಿನ್ನೆಲೆಯಲ್ಲಿ ಇಬ್ಬರು ಮಣಿಪಾಲ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಆಮೇರಿಕಾ ಮತ್ತು ಕುವೈಟ್ ನಿಂದ ವಾಪಾಸಾಗಿದ್ದು ಅವರಲ್ಲಿ ಕೊರೋನಾ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೂ ಐಸೋಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ದೇಹದ ಅಂಶಗಳು ಬೆಂಗಳೂರಿಗೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ಅವರು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿ ಬಿಡಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕೋರಿದ್ದಾರೆ. ಎರಡು ದಿನದ ಒಳಗೆ ವೈದ್ಯಕೀಯ ವರದಿ ಬರಲಿದ್ದು ನಂತರವಷ್ಟೇ ವೈರಸ್ ತಗಲಿದೆಯೋ ಇಲ್ಲವೋ ಎಂಬುದು ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ.










