ಚೆನ್ನೈ : ಲಾರಿ ಮತ್ತು ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿ 6ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬಿಹಾರ ಮೂಲದ ಧರ್ಮ, ಕುಮಾರ್, ಸತೀಶ್, ಬಬ್ಲೂ ಸೇರಿ ಒಟ್ಟು 6ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಈ ಕುರಿತು ನಮಕ್ಕಲ್ ಪೊಲೀಸ್ ವರಿಷ್ಠಾಧಿಕಾರಿ ಅರುಲರಸು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










