ಕಲಬುರಗಿ : ಜಿಲ್ಲೆಯಲ್ಲಿ ಕೊರೊನಾ ವೈರಸ್ನಿಂದ ಮೃತಪಟ್ಟ ವೃದ್ಧನ ಕುಟುಂಬದಲ್ಲಿ ಒಬ್ಬರಿಗೆ ಕೊರೊನಾ ವೈರಸ್ ತಗುಲಿರುವುದಾಗಿ ದೃಢಪಟ್ಟಿದ್ದು, ಈ ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತಮ್ಮ ಟ್ವಿಟರ್ ಮೂಲಕ ಸ್ಪಷ್ಠಪಡಿಸಿದ್ದಾರೆ. “ ಕಲಬುರಗಿಯ 4 COVID-19 ಶಂಕಿತರಲ್ಲಿ, 3 ವ್ಯಕ್ತಿಗಳ ವರದಿ ಈ ಮೊದಲೇ ಬಂದಿದ್ದು, ಇದೀಗ ನಾಲ್ಕನೇ ವ್ಯಕ್ತಿ COVID-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಇವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ನಿಗಾವಹಿಸುವುದರಿಂದ, ಸೋಂಕಿತರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸವಿದೆ. ನಾಗರಿಕರು ಆತಂಕ ಪಡಬೇಕಾಗಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮವಾಗಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೊರೊನಾ ಸೋಂಕು ಪತ್ತೆಯಾಗಿವ ಹಿನ್ನೆಲೆ, ಜಿಲ್ಲಾಧ್ಯಂತ 133 ಜಾರಿ ಮಾಡಿ ಇಂದಿನಿಂದ 8 ದಿನಗಳವರೆಗೆ ನಗರದ ಬಾರ್, ವೈನ್ ಶಾಪ್ ಹಾಗೂ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಬಿ. ಶರತ್ ಅವರು ಆದೇಶ ಹೊರಡಿಸಿದ್ದಾರೆ.










