ಬೆಂಗಳೂರು : ಲಾರಿ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. ಸಿಗ್ನಲ್ ಬಳಿ ನಿಂತಿದ್ದ ಎರಡು ಕಾರುಗಳಿಗೆ ಸಿಲಿಂಡರ್ ತುಂಬಿಕೊಂಡು ಬರುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಂಡಿಕಾ KA40. 6145 ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ವೇಳೆ ಇನ್ನೊಂದು ಕಾರಿನ ಏರ್ ಬ್ಯಾಗ್ ತೆರೆದುಕೊಂಡ ಕಾರಣ ಅದರಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂ ಆಗಿದ್ದು, ಘಟನೆ ಸಂಭವಿಸುತ್ತಿದ್ದ ಲಾರಿ ಚಾಲಕನ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಹಲಸೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾದ ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.










