ನವದೆಹಲಿ : ನಿರ್ಭಯಾ ಪ್ರಕರಣದ ಆರೋಫಿಗಳಿಗೆ ಗಲ್ಲಿಗೇರಿಸಲು ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಈ ನಡುವೆ ಆರೋಪಿಗಳಲ್ಲಿ ಒಬ್ಬರಾದ ಮುಖೇಶ್ ಸಿಂಗ್ ಗಲ್ಲುಶಿಕ್ಷೆಯಿಂದ ಪಾರಾಗಲು ಹೊಸ ತಂತ್ರವನ್ನು ರೂಪಿಸಿದ್ದಾರೆ. ಈಗಾಗಲೇ ನಾಲ್ವರು ಆರೋಪಿಗಳ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಕ್ತಾಯವಾಗಿದ್ದು, ಇನ್ನು ಯಾವುದೇ ಅರ್ಜಿಯನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು. ಆದರೆ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬರಾದ ಮುಖೇಶ್ ಸಿಂಗ್ ಘಟನೆ ನಡೆದ ದಿನ ನಾನು ದೆಹಲಿಯಲ್ಲಿ ಇರಲೇ ಇಲ್ಲ ಎಂಬ ಹೊಸ ನಾಟಕವನ್ನು ಶುರು ಮಾಡಿದ್ದಾರೆ. ಅಲ್ಲದೇ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ನನಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದು, ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಾರ್ಚ್ 20 ಬೆಳಿಗ್ಗೆ 5:30ಕ್ಕೆ ಗಲ್ಲಿಗೇರಿಸಲು ಸಮಯ ನಿಗದಿ ಮಾಡಲಾಗಿದೆ.










