ಬೆಂಗಳೂರಿನ ಮತ್ತಿಬ್ಬರಲ್ಲಿ ಕೊರೊನಾ ಸೋಂಕು ಪತ್ತೆ-ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ…

150
firstsuddi

ಬೆಂಗಳೂರು : ಚೀನಾದಿಂದ ಆರಂಭವಾದ ಮಹಾಮಾರಿ ಕೊರೊನಾ ವೈರಸ್ ಈಗಾ ಇಡೀ ವಿಶ್ವದಾಧ್ಯಂತ ವ್ಯಾಪಿಸಿ ಜನರನ್ನು ಆತಂಕಕ್ಕೀಡು ಮಾಡಿದೆ. ಅಲ್ಲದೇ ಈಗಾ ಬೆಂಗಳೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೊನಾ ಸೋಂಕು ತಗುಲಿರುವುದಾಗಿ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಅಮೆರಿಕಾದಿಂದ 56 ವರ್ಷದ ಒಬ್ಬ ವ್ಯಜ್ತಿ ಹಾಗೂ ಸ್ಪೇನ್‍ನಿಂದ ಬಂದ 25 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ. “ಬೆಂಗಳೂರಿಲ್ಲಿ ಮತ್ತಿಬ್ಬರಿಗೆ COVID-19 ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, USA ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಹಾಗೂ ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.