ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 152ಕ್ಕೆ ಏರಿಕೆಯಾಗಿದೆ. ಈ ನಡುವೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಇಂದಿನಿಂದ ಆರಂಭವಾಗಬೇಕಿದ್ದ ಸಿಬಿಎಸ್‍ಇ 10ನೇ ತರಗತಿ ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದ್ದು, ಬಳಿಕ ಹೊಸ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಿಬಿಎಸ್‍ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ಅವರು ಮಾಹಿತಿ ನೀಡಿದ್ದಾರೆ.










